Monday, April 21, 2025
Google search engine

HomeUncategorizedರಾಷ್ಟ್ರೀಯವಿಕಸಿತ ಭಾರತ ಸಂದೇಶ ನಿಲ್ಲಿಸಲು ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ವಿಕಸಿತ ಭಾರತ ಸಂದೇಶ ನಿಲ್ಲಿಸಲು ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ವಾಟ್ಸಾಪ್​ ನಲ್ಲಿ ವಿಕಸಿತ ಭಾರತ ಅಭಿಯಾನ ನಿಲ್ಲಿಸಲು ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಜನರಿಗೆ ವಾಟ್ಸಾಪ್ ​ನಲ್ಲಿ ವಿಕಸಿತ ಭಾರತಕ್ಕೆ ಸಂಬಂಧಿಸಿದ ಸಂದೇಶ ರವಾನೆಯಾಗುತ್ತಿದೆ. ಈ ಸಂದೇಶವು ನರೇಂದ್ರ ಮೋದಿ ಸರ್ಕಾರವನ್ನು ಉತ್ತೇಜಿಸುತ್ತಿದೆ.

ಇದೀಗ ಕೇಂದ್ರ ಚುನಾವಣಾ ಆಯೋಗವು ತಕ್ಷಣವೇ ಜಾರಿಗೆ ಬರುವಂತೆ ಈ ಸಂದೇಶಗಳನ್ನು ಕಳುಹಿಸುವುದನ್ನು ನಿಲ್ಲಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು  ಕೇಳಿದೆ.

ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೇಶದ ನಾಗರಿಕರ ಮೊಬೈಲ್ ಫೋನ್ ಗಳಿಗೆ ಇಂತಹ ಸಂದೇಶಗಳು ರವಾನೆಯಾಗುತ್ತಿರುವುದು ತಿಳಿದು ಬಂದಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಪ್ರಧಾನಿ ನರೇಂದ್ರ ಮೋದಿಯವರ ಸಂದೇಶಗಳನ್ನು ಕಳುಹಿಸಲಾಗಿದೆ ಎಂದು ಸಚಿವಾಲಯವು ಆಯೋಗಕ್ಕೆ ತಿಳಿಸಿತ್ತು.

ನೆಟ್‌ ವರ್ಕ್ ಸಮಸ್ಯೆಯಿಂದಾಗಿ ಅವರಿಗೆ ತಲುಪುವುದು ವಿಳಂಬವಾಗಿರಬಹುದು ಎಂದು ಸಚಿವಾಲಯವು ಆಯೋಗಕ್ಕೆ ಮಾಹಿತಿ ನೀಡಿದೆ.

ಈ ಸಂದೇಶಕ್ಕೆ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಇದು, ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

ಲೋಕಸಭಾ ಚುನಾವಣೆ ಏಪ್ರಿಲ್​ 19ರಿಂದ ಆರಂಭವಾಗಲಿದ್ದು ಜೂನ್​ 1ರವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿದ್ದು, ಜೂನ್ 4ಕ್ಕೆ ಫಲಿತಾಂಶ ಹೊರಬೀಳಲಿದೆ.

RELATED ARTICLES
- Advertisment -
Google search engine

Most Popular