ನವದೆಹಲಿ: ವಿರೋಧ ಪಕ್ಷಗಳ ವಿರೋಧದ ನಡುವೆ ಕೇಂದ್ರ ಸರ್ಕಾರ ಇಂದು (ಏಪ್ರಿಲ್ 2) ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಯನ್ನು ಮಂಡಿಸಿದೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮತ್ತು ಸಮಾಜವಾದಿ ಪಾರ್ಟಿ (ಎಸ್‌ಪಿ) ಈಗಾಗಲೇ ಪಕ್ಷದ ಲೋಕಸಭಾ ಸದಸ್ಯರಿಗೆ ವಿಪ್ ಜಾರಿಗೊಳಿಸಿದ್ದವು.
ವಿಪ್ ಎನ್ನುವುದು ರಾಜಕೀಯ ಪಕ್ಷಗಳು ತಮ್ಮ ಶಾಸನ ಪ್ರತಿನಿಧಿಗಳಿಗೆ ನೀಡುವ ಔಪಚಾರಿಕ ಲಿಖಿತ ನಿರ್ದೇಶನವಾಗಿದ್ದು, ಅವರು ಸಂಸತ್ತು ಅಥವಾ ರಾಜ್ಯ ಸಭೆಗಳಲ್ಲಿ ಪ್ರಮುಖ ಮತಗಳಿಗೆ ಹಾಜರಾಗಬೇಕು ಮತ್ತು ಪಕ್ಷದ ಅಧಿಕೃತ ನಿಲುವಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಆದೇಶಿಸುವಂಥದ್ದಾಗಿದೆ.
ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2024 ರ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯಿತು. ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ. ಕಾಂಗ್ರೆಸ್ ಕೂಡ ಆರಂಭದಲ್ಲಿ ಮಸೂದೆಯನ್ನು ವಿರೋಧಿಸಿತು. 1995 ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಇದೇ ಮೊದಲಲ್ಲ. ಈ ಕಾನೂನನ್ನು 2013 ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ತಿದ್ದುಪಡಿ ಮಾಡಲಾಗಿತ್ತು.