Friday, April 25, 2025
Google search engine

HomeUncategorizedರಾಷ್ಟ್ರೀಯಪಾಕಿಸ್ತಾನಿ ಪ್ರಜೆಗಳು ಭಾರತ ತೊರೆಯುವಂತೆ ಕೇಂದ್ರ ಸರ್ಕಾರ ಆದೇಶ; ವೀಸಾ ಸೇವೆಗಳು ಸ್ಥಗಿತ

ಪಾಕಿಸ್ತಾನಿ ಪ್ರಜೆಗಳು ಭಾರತ ತೊರೆಯುವಂತೆ ಕೇಂದ್ರ ಸರ್ಕಾರ ಆದೇಶ; ವೀಸಾ ಸೇವೆಗಳು ಸ್ಥಗಿತ

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸರ್ಕಾರ ಗುರುವಾರ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ.

ಎಪ್ರಿಲ್ 27 ರಿಂದ ಜಾರಿಗೆ ಬರುವಂತೆ ಎಲ್ಲಾ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದುಗೊಂಡಿರುವುದರಿಂದ ಅವರು ಭಾರತವನ್ನು ತೊರೆಯಬೇಕಾಗುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಅಲ್ಲದೆ, ಭಾರತೀಯ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ವಿದೇಶಾಂಗ ಸಚಿವಾಲಯ ಸೂಚಿಸಿದೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭದ್ರತೆ ಕುರಿತ ಸಂಪುಟ ಸಮಿತಿಯು ಈ ನಿರ್ಧಾರ ತೆಗೆದುಕೊಂಡಿದ್ದು, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಭಾರತವು ಪಾಕಿಸ್ತಾನಿ ಪ್ರಜೆಗಳಿಗೆ ನೀಡಿರುವ ಎಲ್ಲಾ ಅಸ್ತಿತ್ವದಲ್ಲಿರುವ ಮಾನ್ಯ ವೀಸಾಗಳನ್ನು ಎಪ್ರಿಲ್ 27, 2025 ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುವ ವೈದ್ಯಕೀಯ ವೀಸಾಗಳು ಎಪ್ರಿಲ್ 29, 2025 ರವರೆಗೆ ಮಾತ್ರ ಮಾನ್ಯವಾಗಿರುತ್ತವೆ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

RELATED ARTICLES
- Advertisment -
Google search engine

Most Popular