Sunday, April 6, 2025
Google search engine

HomeUncategorizedರಾಷ್ಟ್ರೀಯH5N1 ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಕೋಳಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸರ್ಕಾರ...

H5N1 ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಕೋಳಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಹಲವಾರು ರಾಜ್ಯಗಳಲ್ಲಿ ಹೆಚ್5ಎನ್1(H5N1) ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಕೋಳಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಹಕ್ಕಿ ಜ್ವರ ಹರಡುವಿಕೆ ತಡೆಗಟ್ಟಲು ಮೂರು-ಹಂತದ ಕಾರ್ಯತಂತ್ರದ ಭಾಗವಾಗಿ ಎಲ್ಲಾ ಕೋಳಿ ಸಾಕಣೆ ಕೇಂದ್ರಗಳು ಒಂದು ತಿಂಗಳೊಳಗೆ ಕಡ್ಡಾಯವಾಗಿ ಆಯಾ ರಾಜ್ಯ ಪಶುಸಂಗೋಪನಾ ಇಲಾಖೆಗಳಲ್ಲಿ ನೋಂದಣಿ ಮಾಡಬೇಕು ಎಂದು ಕೇಂದ್ರ ಪಶುಸಂಗೋಪನೆ ಸಚಿವಾಲಯ ಶುಕ್ರವಾರ ತಿಳಿಸಿದೆ.

ದೇಶದ ಹಲವಾರು ಪ್ರದೇಶಗಳಲ್ಲಿ ಹೆಚ್5ಎನ್1 ವೈರಸ್ ನಿರಂತರವಾಗಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ದೇಶನ ಬಂದಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಮಧ್ಯಪ್ರದೇಶ, ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳ 34 ಕೇಂದ್ರಗಳಲ್ಲಿ ಅಧಿಕಾರಿಗಳು ಹಕ್ಕಿ ಜ್ವರದ ಹರಡುವಿಕೆಯನ್ನು ದೃಢಪಡಿಸಿದ್ದಾರೆ.

ಹಕ್ಕಿ ಜ್ವರವನ್ನು ಹಾಗೂ ಅದರ ಹರಡುವಿಕೆಯನ್ನು ತಡೆಗಟ್ಟಲು ತುರ್ತು ಕ್ರಮಗಳ ಕುರಿತು ಚರ್ಚಿಸಲು ಅಲ್ಕಾ ಉಪಾಧ್ಯಾಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಕೃಷಿ ಭವನದಲ್ಲಿ ಕೋಳಿ ಉದ್ಯಮ ಪ್ರತಿನಿಧಿಗಳು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಅಧಿಕಾರಿಗಳು ಮತ್ತು ಇತರ ಪಾಲುದಾರರೊಂದಿಗೆ ಉನ್ನತ ಮಟ್ಟದ ಸಭೆ ನಡೆಯಿತು.

RELATED ARTICLES
- Advertisment -
Google search engine

Most Popular