Thursday, April 23, 2026
Google search engine

HomeUncategorizedರಾಷ್ಟ್ರೀಯಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವದಂತಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವದಂತಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ವದಂತಿಗಳಿಗೆ ಬ್ರೇಕ್ ಹಾಕಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 25-28 ರೂ. ಏರಿಕೆಯಾಗುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಸರ್ಕಾರ ತಳ್ಳಿಹಾಕಿದ್ದು, ಅಂತಹ ಯಾವುದೇ ದರ ಏರಿಕೆ ಬಗ್ಗೆ ಚಿಂತನೆ ಇಲ್ಲ  ಎಂದು ಸ್ಪಷ್ಟಪಡಿಸಿದೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಸುದ್ದಿಗಳು ವರದಿಯಾಗಿವೆ. ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಗಣನೆಯಲ್ಲಿಲ್ಲ. ಇಂತಹ ಸುದ್ದಿಗಳು ನಾಗರಿಕರಲ್ಲಿ ಭಯ ಹುಟ್ಟಿಸಲು ಮಾಡಲಾಗಿದೆ. ಇವು ದುರುದ್ದೇಶ ಹಾಗೂ ದಾರಿತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ತಿಳಿಸಿದೆ.

ಇನ್ನೂ ಕೆಲವು ವರದಿಗಳ ಪ್ರಕಾರ, ಏ.29ರಂದು ವಿಧಾನಸಭಾ ಚುನಾವಣೆ ಕೊನೆಗೊಂಡ ನಂತರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತೀವ್ರ ಏರಿಕೆಯನ್ನು ಕಾಣಬಹುದು. ಕಚ್ಚಾ ತೈಲವು ಬ್ಯಾರೆಲ್‌ಗೆ 120 ಡಾಲರ್ (11,293 ರೂ.) ಸಮೀಪಿಸುತ್ತಿದ್ದು, ಇದರ ಆಧಾರದ ಮೇಲೆ ಲೀಟರ್‌ಗೆ 25-28 ರೂ. ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗದ ಏಕೈಕ ದೇಶವೆಂದರೆ ಅದು ಭಾರತ ಎಂದು ಸರ್ಕಾರ ಪುನರುಚ್ಚರಿಸಿದೆ. ಮಧ್ಯಪ್ರಾಚ್ಯದ ಸಂಘರ್ಷದ ಮಧ್ಯೆಯೂ ಸರ್ಕಾರ ನಾಗರಿಕರನ್ನು ಬೆಲೆ ಏರಿಕೆಯಿಂದ ರಕ್ಷಿಸಲು ನಿರಂತರ ಕ್ರಮಗಳನ್ನು ತೆಗೆದುಕೊಂಡಿದೆ. ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ ಎಂದಿದೆ.

ಇನ್ನೂ ಎಲ್ಲಾ ರಿಫೈನರಿಗಳು ಸಾಕಷ್ಟು ಕಚ್ಚಾ ತೈಲದೊಂದಿಗೆ ಹೆಚ್ಚಿನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚಿನ ಲಭ್ಯತೆಗಾಗಿ ಸಾಕಷ್ಟು ಕೆಲಸ ನಿರ್ವಹಣೆ ಮಾಡಲಾಗುತ್ತಿದೆ ಎಂದು ಸರ್ಕಾರ ದೃಢಪಡಿಸಿದೆ.

RELATED ARTICLES
- Advertisment -
Google search engine

Most Popular