Thursday, April 17, 2025
Google search engine

Homeರಾಜ್ಯಕರ್ನಾಟಕಕ್ಕೆ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ: ಪ್ರಲ್ಹಾದ್ ಜೋಶಿ

ಕರ್ನಾಟಕಕ್ಕೆ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ: ಪ್ರಲ್ಹಾದ್ ಜೋಶಿ

ನವದೆಹಲಿ: ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಆಹಾರ ಸಚಿವ ಪ್ರಲ್ಹಾದ್ ಜೋಶಿ ಘೋಷಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ ೨೮ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ.

ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ. ಇರುವ ಸ್ಟಾಕನ್ನೆಲ್ಲ ರಾಜ್ಯಕ್ಕೆ ಮಾರಾಟ ಮಾಡಿ ಖಾಲಿ ಮಾಡಿದರೆ ತುರ್ತು ಸಂದರ್ಭಗಳಲ್ಲಿ ವಿತರಣೆ ಮಾಡಲು ಕಷ್ಟ ಎಂಬುದು ಕೇಂದ್ರದ ವಾದವಾಗಿತ್ತು. ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿತ್ತು.

RELATED ARTICLES
- Advertisment -
Google search engine

Most Popular