Wednesday, December 3, 2025
Google search engine

Homeರಾಜ್ಯಸುದ್ದಿಜಾಲಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ: ಚಳಿಗಾಲ ಅಧಿವೇಶನ ಸಮಯದಲ್ಲಿ ಬೆಳಗಾವಿಯಲ್ಲಿ ವ್ಯಾಪಕ ಭದ್ರತೆ.

ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ: ಚಳಿಗಾಲ ಅಧಿವೇಶನ ಸಮಯದಲ್ಲಿ ಬೆಳಗಾವಿಯಲ್ಲಿ ವ್ಯಾಪಕ ಭದ್ರತೆ.

ವರದಿ :ಸ್ಟೀಫನ್ ಜೇಮ್ಸ್.

ಅಧಿವೇಶನ ವೇಳೆಗೆ 6ರಿಂದ 8 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ.

ಬೆಳಗಾವಿ: ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಹಿನ್ನೆಲೆ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಕೇಂದ್ರ ಗುಪ್ತಚರ ಇಲಾಖೆಯಿಂದ ಎಚ್ಚರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳು ಹೈಅಲರ್ಟ್‌ ಆಗಿವೆ.

ಅಧಿವೇಶನ ವೇಳೆಗೆ 6ರಿಂದ 8 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ.

ಸುವರ್ಣ ಸೌಧ ಆವರಣದಲ್ಲಿ ನಿಷೇಧಾಜ್ಞೆ

ಅಧಿವೇಶನ ಅವಧಿಯಲ್ಲಿ ಸುವರ್ಣ ಸೌಧ ಆವರಣದಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತವೆ. ಹೀಗಾಗಿ ಪ್ರತಿದಿನ 50 ಸಾವಿರ ಜನ ಸೇರುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಯಾವುದೇ ಅಚಾತುರ್ಯ, ಅವಘಡ ಸಂಭವಿಸದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಸುವರ್ಣ ವಿಧಾನಸೌಧದ ಸುತ್ತಮುತ್ತ 3 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

RELATED ARTICLES
- Advertisment -
Google search engine

Most Popular