Friday, April 18, 2025
Google search engine

Homeರಾಜ್ಯಸುದ್ದಿಜಾಲಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಸಿಇಒ ಸೂಚನೆ

ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಸಿಇಒ ಸೂಚನೆ

ರಾಮನಗರ: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುವ ಕಾರಣ ಜಿಲ್ಲೆಯಲ್ಲಿ ವಿಶೇಷವಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದುಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ನಗರದಜಿಲ್ಲಾ ಪಂಚಾಯತ್‌ನ ಮಿನಿ ಸಭಾಂಗಣದಲ್ಲಿ ಆಯೋಜಿಲಾಗಿದ್ದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಆರೋಗ್ಯ ಮತ್ತುಕುಟುಂಬ ಕಲ್ಯಾಣಇಲಾಖೆಯಅಧಿಕಾರಿ ವೃಂದದವರು ಜಿಲ್ಲೆಯಲ್ಲಿ ಡೆಂಗ್ಯೂ ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಾರ್ವಜನಿಕರಲ್ಲಿ ಈ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸಬೇಕು, ಮುಂಜಾಗ್ರತಾ ಕ್ರಮವಾಗಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು ಸಂಬಂಧಿಸಿದ ಇಲಾಖೆಗಳು ಈ ಬಗ್ಗೆ ಕಾಳಜಿ ವಹಿಸಬೇಕೆಂದರು.

ನವಜಾತ ಶಿಶು, ಅಂಗನವಾಡಿ, ಸರ್ಕಾರಿ/ ಸರ್ಕಾರಿಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ೦-೧೮ ವದೊಳಗಿನ ಮಕ್ಕಳ ಆರೋಗ್ಯತಪಾಸಣೆ ಮಾಡಬೇಕು, ಆರೋಗ್ಯದ ಸಮಸ್ಯೆಗಳು ಕಂಡುಬಂದರೆವೈದ್ಯಕೀಯಚಿಕಿತ್ಸೆ ನೀಡಿಗುಣಪಡಿಸುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಎಲ್ಲಾತಾಲ್ಲೂಕುಆರೋಗ್ಯ ಅಧಿಕಾರಿಗಳು ಆಯಾತಾಲ್ಲೂಕಿನಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಮಕ್ಕಳ ಆರೋಗ್ಯದ ವರದಿಯನ್ನುಕಾಲ ಕಾಲಕ್ಕೆ ನೀಡಬೇಕು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಸಹಾಯದಿಂದಚಿಕಿತ್ಸೆ ಬಾಕಿ ಉಳಿದ ಮಕ್ಕಳನ್ನು ಗುರುತಿಸಿ ಅವರಆರೋಗ್ಯದ ಸ್ಥಿತಿಗತಿಯ ಮಾಹಿತಿಪಡೆಯಬೇಕು, ಖಾಸಗಿ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯದಬಗ್ಗೆ ನಿಗಾವಹಿಸಬೇಕು ಎಂದರು.
ಮಕ್ಕಳ ಶಸ್ತ್ರಚಿಕಿತ್ಸೆಯು ಸೂಕ್ಷ್ಮ ವಿಷಯವಾಗಿದ್ದು, ಜಿಲ್ಲಾ ಶಸ್ತ್ರಚಿಕಿತ್ಸಧಿಕಾರಿಗಳು ಅವುಗಳನ್ನು ಮುಂಚೆಯೆ ಪತ್ತೆಹಚ್ಚಿ ನೂನ್ಯತೆಗೆ ಒಳಗಾದ ಮಕ್ಕಳನ್ನು ಸೂಕ್ತ ಚಿಕಿತ್ಸೆ ನೀಡಬೇಕು.

ಜಿಲ್ಲಾಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿಡಾ. ನಿರಂಜನ್, ಆರ್.ಸಿ.ಎಚ್ ಅಧಿಕಾರಿಡಾ.ರಾಜು, ಜಿಲ್ಲಾ ಶಸ್ತ್ರಚಿಕಿತ್ಸಕರಾದಡಾ. ಮಂಜುನಾಥ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಡಾ.ಶಶಿಧರ್, ಜಿಲ್ಲಾಕ್ಷಯರೋಗ ನಿಯಂತ್ರಣಾಧಿಕಾರಿಡಾ.ಕುಮಾರ್, ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಇತರರುಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular