ಕೊಪ್ಪಳ : ಕನಕಗಿರಿ ಉತ್ಸವ-2024ರ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ ಉತ್ಸವ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಮಾ.2 ಮತ್ತು 3ರಂದು ಎರಡು ದಿನಗಳ ಕಾಲ ನಡೆಯುವ ಐತಿಹಾಸಿಕ ಕನಕಗಿರಿ ಉತ್ಸವಕ್ಕೆ ಈಗಾಗಲೇ ಸಕಲ ಕಾಮಗಾರಿಗಳು ನಡೆಯುತ್ತಿದ್ದು, ಉತ್ಸವದ ಮುಖ್ಯ ವೇದಿಕೆಯ ಸಿದ್ಧತೆ ಕಾರ್ಯವನ್ನು ಸಿಇಒ ಪರಿಶೀಲಿಸಿದರು. ಇದೇ ವೇಳೆ ವೇದಿಕೆಯಲ್ಲಿ ಸ್ವಚ್ಛತೆ, ಆಸನ ವ್ಯವಸ್ಥೆ, ಊಟದ ಕೌಂಟರ್, ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಮತ್ತಿತರ ವಿಷಯಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕನಕಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.