Friday, April 4, 2025
Google search engine

Homeರಾಜಕೀಯಕಲುಷಿತ ನೀರಿನ ದುರಂತ ಮರುಕಳಿಸಿದರೆ ಸಿಇಓರನ್ನು ಹೊಣೆ ಮಾಡಿ ಅಮಾನತು: ಸಿಎಂ ಖಡಕ್ ಎಚ್ಚರಿಕೆ

ಕಲುಷಿತ ನೀರಿನ ದುರಂತ ಮರುಕಳಿಸಿದರೆ ಸಿಇಓರನ್ನು ಹೊಣೆ ಮಾಡಿ ಅಮಾನತು: ಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು: ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರು ಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ನಡೆಸಿದ ವೇಳೆ ಈ ಎಚ್ಚರಿಕೆ ನೀಡಿದರು.

ಮೊದಲ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನ್ ಮಾಡ್ತಾ ಇದೀರಿ? ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ ಎಂದ ಅವರು, ಮತ್ತೆ ಕಲುಷಿತ ನೀರಿನ ಅನಾಹುತ ಆಗಬಾರದು. ಮತ್ತೆ ಮರುಕಳಿಸಿದರೆ ನೀವೇ ಹೊಣೆ ಆಗುತ್ತೀರಿ. ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೋ ಆ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

ಈಗಾಗಲೇ ಸ್ಥಳೀಯವಾಗಿ ತನಿಖೆ ನಡೆಯುತ್ತಿದೆ. ಬೆಂಗಳೂರು ಕೇಂದ್ರದಿಂದಲೂ ತಂಡವನ್ನು ಕಳುಹಿಸಿತನಿಖೆ ನಡೆಸಲಾಗುವುದು. ಎರಡೂ ವರದಿಗಳು ಬಂದ ಬಳಿಕ ತಪ್ಪಿತಸ್ಥರನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular