Wednesday, July 1, 2026
Google search engine

Homeರಾಜ್ಯಸುದ್ದಿಜಾಲಸೆಸ್ಕ್ : ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

ಸೆಸ್ಕ್ : ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

• ಅಗತ್ಯ ದಾಖಲೆ ಸಿದ್ಧವಿಟ್ಟುಕೊಳ್ಳಲು ಮನವಿ
• ಮನೆ ಬಾಗಿಲಿಗೆ ಬರಲಿದ್ದಾರೆ ಮೀಟರ್‌ ರೀಡರ್‌, ಸಿಬ್ಬಂದಿ

ಮಂಡ್ಯ: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹಣೆ ಕಾರ್ಯ ಬುಧವಾರದಿಂದ(ಜುಲೈ 01) ಆರಂಭಗೊಂಡಿದ್ದು, ಗ್ರಾಹಕರು ಸಹಕರಿಸುವಂತೆ ಚಾವಿಸನಿನಿ (ಸೆಸ್ಕ್) ಕೋರಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸೆಸ್ಕ್, 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಸೆಸ್ಕ್ ನ ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ, ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಹಾಗೂ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ.

ಸೆಸ್ಕ್ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ನೀಡಬೇಕಾದ ದಾಖಲಾತಿಗಳ ವಿವರ:

  1. ಆಧಾರ್ ಕಾರ್ಡ್
  2. ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  3. ಮತದಾರರ ಗುರುತಿನ ಚೀಟಿ (ವೋಟರ್ ಐಡಿ)
  4. ಪ್ಯಾನ್ ಕಾರ್ಡ್
  5. ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ)
  6. ರೇಷನ್ ಕಾರ್ಡ್
  7. ಜಾತಿ ಪ್ರಮಾಣ ಪತ್ರ (ಅನ್ವಯಿಸುವಲ್ಲಿ ಮಾತ್ರ)

ಈ ಪ್ರಕ್ರಿಯೆಗೆ ಮೀಟರ್ ರೀಡರ್‌ಗಳ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಸೆಸ್ಕ್‌ನ ಅಧಿಕೃತ ಮೀಟರ್ ರೀಡರ್‌ಗಳ ಗುರುತಿನ ಚೀಟಿಯನ್ನು ಪರಿಶೀಲಿಸಿ, ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೆಸ್ಕ್ ಮನವಿ ಮಾಡಿದೆ.

RELATED ARTICLES
- Advertisment -
Google search engine

Most Popular