Sunday, April 6, 2025
Google search engine

Homeರಾಜ್ಯಏಪ್ರಿಲ್‌ 15ರಿಂದ 17 ವರೆಗೆ ಸಿಇಟಿ ಪರೀಕ್ಷೆ

ಏಪ್ರಿಲ್‌ 15ರಿಂದ 17 ವರೆಗೆ ಸಿಇಟಿ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 15ರಿಂದ 17ವರೆಗೆ ನಡೆಯಲಿದೆ. ಏಪ್ರಿಲ್ 18 ಕ್ಕೆ ನಿಗದಿಪಡಿಸಲಾಗಿದ್ದ ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಪ್ರೀಪೋನ್‌ ಆಗಿದೆ. ಏಪ್ರಿಲ್ 18 ಶುಕ್ರವಾರ ಗುಡ್ ಫ್ರೈಡೇ ಇರುವುದರಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.

ವೃತ್ತಿಪರ ಕೋರ್ಸ್ ಗಳಿಗೆ ನಡೆಸುವ ಸಿಇಟಿ ಪರೀಕ್ಷೆಗೆ ಜನವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಈ ವರ್ಷ 3 ಲಕ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಸಿಇಟಿ ಪರೀಕ್ಷೆ ಬರೆಯುವ ನೀರಿಕ್ಷೆಯಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಏಪ್ರಿಲ್ 15ರಂದು ಕನ್ನಡ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ನಡೆಯಲಿದೆ. 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು ,ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಮತ್ತು ಕೆಇಎ ನಡೆಸಿದ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ವಿನಾಯಿತಿ ಇರುತ್ತದೆ.

ಏಪ್ರಿಲ್ 16 ರಂದು 10-30 ರಿಂದ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2-30 ರಿಂದ ರಾಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಮರುದಿನ ಅಂದರೆ ಏಪ್ರಿಲ್ 17 ರಂದು ಬೆಳಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.

RELATED ARTICLES
- Advertisment -
Google search engine

Most Popular