ಬಳ್ಳಾರಿ: ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿ ಸಾವು ಪ್ರಕರಣ ತನಿಖೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು.
ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ಮತ್ತು ವೈದ್ಯರ ಜೊತೆಗೆ ಚರ್ಚೆ ವೇಳೆ ವೈದ್ಯರ ಮೇಲೆ ನಾಗಲಕ್ಷ್ಮಿ ಗರಂ ಆದರು. ನೀರಿನ ಟ್ಯಾಂಕ್ ನೋಡಿ ಜಿಲ್ಲಾಸ್ಪತ್ರೆ ವೈದ್ಯರಿಗೆ ತರಾಟೆ ತೆಗೆದುಕೊಂಡರು.
ಜಿಲ್ಲಾಸ್ಪತ್ರೆ ಹೆರಿಗೆ ಥಿಯೇಟರ್, ಹೆರಿಗೆ ವಾರ್ಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಗಲಕ್ಷ್ಮಿ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಬಸಾ ರೆಡ್ಡಿ ಮೂಲಕ ಮಾಹಿತಿ ಪಡೆದುಕೊಂಡರು. ನಾಗಲಕ್ಷ್ಮಿ ಭೇಟಿಗೆ ಜಿಲ್ಲಾ ವೈದ್ಯಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.