ಬೆಂಗಳೂರು : ಲೋಕಸಭಾ ಚುನಾವಣೆ ಸಂದರ್ಭ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಮೀರಿ ಪರಿಣಾಮಕಾರಿಯಾಗಿ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದೆ ಎಂದು ಯುವ ಬ್ರೀಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯ ನಮೋ ಬ್ರಿಗೇಡ್ ಯಾತ್ರೆಯನ್ನು ಮುಗಿಸಿದ ಬಳಿಕ ಫೇಸ್‌ಬುಕ್‌ನಲ್ಲಿ ಲೈವ್ ಬಂದು ಮಾತನಾಡಿದ ಚಕ್ರವರ್ತಿ ಸೂಲಿಬೆಲೆ , ನಾನು ಪ್ರಾಮಾಣಿಕವಾಗಿ ಕೆಲವು ವಿಚಾರ ಒಪ್ಪಿಕೊಳ್ಳಬೇಕು. ನಾನು ಕಾಂಗ್ರೆಸ್ ಪಕ್ಷದವರನ್ನು ಅಭಿನಂದಿಸುತ್ತೇನೆ. ನೀವು ತಳಮಟ್ಟದಿಂದ ನೀವು ಚೆನ್ನಾಗಿ ಕೆಲಸ ಮಾಡಿದ್ದೀರಿ. ಕಾಂಗ್ರೆಸ್ ಪಕ್ಷವು ೨೦೧೪ ಮತ್ತು ೨೦೧೯ ರಲ್ಲಿ ಮಾಡದಿದ್ದನ್ನು ನೀವು ಈ ಬಾರಿ ಮಾಡಿದ್ದೀರಿ. ಮನೆಗಳನ್ನು ತಲುಪುವಲ್ಲಿ ನೀವು ಬಿಜೆಪಿಗಿಂತಲೂ ಉತ್ತಮವಾಗಿ ಕೆಲಸ ಮಾಡಿದ್ದೀರಿ ಎಂದು ಹೊಗಳಿಕೆಯ ಮಾತನ್ನಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾದ ಅಲೆಯಿದೆ. ಆದರೆ, ಕಾಂಗ್ರೆಸ್ ಸರ್ಕಾರವು ಸೃಷ್ಟಿಸಿದ ಭಯದ ವಾತಾವರಣದಿಂದಾಗಿ ಅನೇಕರು ಬಹಿರಂಗವಾಗಿ ಹೊರಬರಲಿಲ್ಲ. ಆದರೆ ಪ್ರಧಾನಿ ಮೋದಿ ಜನರ ಮನಸ್ಸಿನಲ್ಲಿದ್ದಾರೆ ಎಂದು ತಿಳಿಸಿದರು. ಈ ಬಾರಿ ಬಿಜೆಪಿ ಹೆಚ್ಚಿನ ಮನೆಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಕಾರ್ಯಕರ್ತರಿಲ್ಲದ ಕಾರಣ, ಕರಪತ್ರಗಳು ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಲು ಮನೆಗಳನ್ನು ತಲುಪುವಲ್ಲಿ ಅದು ಯಶಸ್ವಿಯಾಗಿದೆ. ಇದಕ್ಕಾಗಿ ದೊಡ್ಡ ಪ್ರಯತ್ನ ನಡೆಯಿತು ಎಂದು ಅವರು ತಿಳಿಸಿದರು.