Sunday, April 20, 2025
Google search engine

Homeರಾಜ್ಯಸುದ್ದಿಜಾಲಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ: ಸುರೇಶ್ ಗೌಡ

ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ: ಸುರೇಶ್ ಗೌಡ

ಮಂಡ್ಯ: ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ. ಚಲುವರಾಯಸ್ವಾಮಿ 300 – 400 ಕೋಟಿ ಲೂಟಿ ಹೊಡೆದಿದ್ದಾನೆ ಎಂದು  ಮಾಜಿ ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ದುಡ್ಡನ್ನು ಏರ್‌ ಲಿಫ್ಟ್ ಮಾಡ್ತಿದೆ. ಹಿಂದಿನ ಸರ್ಕಾರದಲ್ಲಿ ಜೆಸಿಬಿಯಲ್ಲಿ ಹಣ ತುಂಬುತ್ತಿದ್ದಾರೆ ಎನ್ನುತ್ತಿದ್ರು. ಆದರೆ ಈ ಸರ್ಕಾರ ಭ್ರಷ್ಟ ಹಣವನ್ನು ಏರ್‌ ಲಿಫ್ಟ್ ಮಾಡ್ತಿದೆ. ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಅಧಿಕಾರ ಸಿಕ್ಕಾಗ ಜನಗಳಿಗೆ ಒಳ್ಳೆಯದು ಮಾಡಬೇಕು. ಕಡಿಮೆ ಎಂದರೂ ಇಲ್ಲಿವರೆಗೆ 300-400 ಕೋಟಿ ಲೂಟಿ ಹೊಡೆದಿದ್ದಾನೆ. ಟ್ರಾನ್ಸ್‌ ಫರ್‌ ನಲ್ಲಿ 150 ಕೋಟಿ, ಜಲಧಾರೆ ಯೋಜನೆ 100 ಕೋಟಿ ಹೊಡೆದಿದ್ದಾರೆ ಎಂದು ಆರೋಪಿಸಿದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷಕ್ಕೆ ಕರ್ನಾಟಕದಿಂದ ಫಂಡ್ ಹೋಗ್ತಿದೆ. ಜನ ಅಧಿಕಾರಗಳನ್ನು ಈ ಬಗ್ಗೆ ಕೇಳಿ ಹೇಳ್ತಾರೆ. ಬಿಜೆಪಿ ಸರ್ಕಾರವೇ ಪರವಾಗಿರಲಿಲ್ಲ ಎಂದು ಅಧಿಕಾರಗಳು ಹೇಳ್ತಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular