Tuesday, April 22, 2025
Google search engine

Homeರಾಜ್ಯಸುದ್ದಿಜಾಲಚಾಮರಾಜನಗರ: ಅ. 18ರಂದು ದಸರಾ ಮ್ಯಾರಥಾನ್

ಚಾಮರಾಜನಗರ: ಅ. 18ರಂದು ದಸರಾ ಮ್ಯಾರಥಾನ್

ಚಾಮರಾಜನಗರ: ಚಾಮರಾಜನಗರ ದಸರಾ ಆಚರಣೆ ಅಂಗವಾಗಿ ಪಾರಂಪರಿಕ ನಡಿಗೆ ಮ್ಯಾರಥಾನ್ ಅನ್ನು ಅ.18ರಂದು ಬೆಳಿಗ್ಗೆ 7 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ಹಮ್ಮಿಕೊಳ್ಳಲಾಗಿದೆ.

ಮ್ಯಾರಥಾನ್ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ಬಿ. ರಾಚಯ್ಯ ಜೋಡಿ ರಸ್ತೆ, ನ್ಯಾಯಾಲಯ ರಸ್ತೆ, ಕರಿನಂಜನಪುರ ರಸ್ತೆ ಮೂಲಕ ಹಾದು ಪ್ರವಾಸಿ ಮಂದಿರದಲ್ಲಿ ಕೊನೆಗೊಳ್ಳಲಿದೆ. ಮ್ಯಾರಥಾನ್ ಕಾರ್ಯಕ್ರಮದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಮ್ಯಾರಥಾನ್ ಮತ್ತು ಯುವ ದಸರಾ ಕಾರ್ಯಕ್ರಮಗಳ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular