ಚಾಮರಾಜನಗರ: ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ನೂತನವಾಗಿ ಮಸಗಾಪುರ ಗ್ರಾಮದಲ್ಲಿ ನಿರ್ಮಿಸಿರುವ ಸತ್ಯ ಗೀತಾ ಜ್ಞಾನ ಪಾಠಶಾಲೆಯ ಉದ್ಘಾಟನಾ ಸಮಾರಂಭವು 27ರ ಭಾನುವಾರ ಬೆಳಗ್ಗೆ 10.30 ಕ್ಕೆ ನಡೆಯಲಿದೆ.
ದಿವ್ಯ ಸಾನಿಧ್ಯವನ್ನು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕೊಳ್ಳೇಗಾಲದ ರಾಜಯೋಗಿನಿ ಬ್ರಹ್ಮಾಕುಮಾರಿ ಪ್ರಭಾಮಣಿಜಿಯವರು ವಹಿಸಲಿದ್ದಾರೆ. ಉದ್ಘಾಟನೆಯನ್ನು ಚಾಮರಾಜನಗರ ತಾಲೂಕು ತಹಸಿಲ್ದಾರ್ ಬಿ ಗಿರಿಜಾರವರು ನೆರವೇರಿಸುವರು. ಅಧ್ಯಕ್ಷತೆಯನ್ನು ಚಾಮರಾಜನಗರ ನಗರಸಭೆಯ ಅಧ್ಯಕ್ಷರಾದ ಸುರೇಶ್ ನಾಯಕ್ ವಹಿಸುವರು .
ಮುಖ್ಯ ಅತಿಥಿಗಳಾಗಿ ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ, ಸಮಾಜ ಸೇವಕರಾದ ಡಾ. ಪರಮೇಶ್ವರಪ್ಪ, ಟಿ ಜೆ ಸುರೇಶ್ , ಮಸಗಾಪುರ ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ್ ಹಾಗೂ ಮುಖಂಡ ನಂದೀಶ್ ರವರು ಆಗಮಿಸಲಿದ್ದಾರೆ.
ಬೆಳಿಗ್ಗೆ ಒಂಬತ್ತು ಗಂಟೆಗೆ ಗ್ರಾಮದ ರಾಜಬೀದಿಗಳಲ್ಲಿ ಶಾಂತಿ ಶೋಭಾ ಯಾತ್ರೆ ನಡೆಯಲಿದೆ ಎಂದು ಚಾಮರಾಜನಗರ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಬಿಕೆ ದಾನೇಶ್ವರಿಅಕ್ಕರವರು ತಿಳಿಸಿದ್ದಾರೆ.