Sunday, April 20, 2025
Google search engine

Homeರಾಜಕೀಯಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್​ ಗೆ ಅನಾರೋಗ್ಯ:  ಆಸ್ಪತ್ರೆಗೆ ದಾಖಲು

ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್​ ಗೆ ಅನಾರೋಗ್ಯ:  ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್‌ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ಐಸಿಯು ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಶ್ರೀನಿವಾಸಪ್ರಸಾದ್‌ ಗೆ ಡಾ. ಸುದರ್ಶನ್ ಬಲ್ಲಾಳ್‌ ಚಿಕಿತ್ಸೆ ನೀಡುತ್ತಿದ್ದಾರೆ.

ಇನ್ನೆರಡು ದಿನಗಳು ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತದೆ. ನಂತರ ವಾರ್ಡ್‌ ಗೆ ಶಿಫ್ಟ್ ಮಾಡಲಾಗುವುದು ಎಂದು ಡಾ. ಸುದರ್ಶನ್ ಬಲ್ಲಾಳ್‌ ತಿಳಿಸಿದ್ದಾರೆ.

ಶ್ರೀನಿವಾಸ್ ಪ್ರಸಾದ್​ ಇತ್ತೀಚೆಗಷ್ಟೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಮಧ್ಯೆ, ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಮತ್ತು ಸಹೋದರ ಕಾಂಗ್ರೆಸ್‌ ಸೇರಿದ್ದರು. ಇದು ಚಾಮರಾಜನಗರ ರಾಜಕೀಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿತ್ತು. ಸಿಎಂ ಸಿದ್ದರಾಮಯ್ಯ ಸಹ ತವರು ಕ್ಷೇತ್ರ ವರುಣಾ ಇರುವ ಲೋಕಸಭಾ ಕ್ಷೇತ್ರವಾದ ಚಾಮರಾಜನಗರ ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದು, ಶ್ರೀನಿವಾಸ್ ಪ್ರಸಾದ್​ರನ್ನು ಇತ್ತೀಚೆಗೆ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದು ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಕಡೆ ವಾಲಿದ್ದಾರೆಯೇ ಎಂಬ ಅನುಮಾನಕ್ಕೆ ಕಾರಣವಾಗಿತ್ತು.

ಕರ್ನಾಟಕದ ಹಿರಿಯ ಒಬ್ಬರಾಗಿರುವ ಶ್ರೀನಿವಾಸದ ಪ್ರಸಾದ್, ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2013 ರಿಂದ 2016 ರವರೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.

RELATED ARTICLES
- Advertisment -
Google search engine

Most Popular