ಚಾಮರಾಜನಗರ: ಆಕಸ್ಮಿಕ ಬೆಂಕಿ ಅವಘಡದಿಂಗಾಗಿ ಹಸಿರು ರೈತ ಉತ್ಪಾದಕರ ಕಂಪನಿ ಭಸ್ಮವಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಹೆಬ್ಬಸೂರಿನಲ್ಲಿ ನಡೆದಿದೆ.
ಚಾಮರಾಜನಗರ ತಾಲ್ಲೂಕಿನ ಹೆಬ್ಬಸೂರು ಗ್ರಾಮದಲ್ಲಿರುವ ಹಸಿರು ರೈತ ಉತ್ಪಾದಕರ ಕಂಪನಿಯಲ್ಲಿ ಬುಧವಾರ ಮುಂಜಾನೆ 1.30 ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ಭಸ್ಮವಾಗಿದೆ ಎಂದು ತಿಳಿದು ಬಂದಿದೆ.
ಬೆಂಕಿಯ ಕೆನ್ನಾಲಿಗೆಗೆ ಕಂಪನಿಯ ವಸ್ತುಗಳು ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು.
ರಾಮಸಮುದ್ರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶ್ರೀಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕಾರಣ ತಿಳಿದುಬಂದಿಲ್ಲವಾದರೂ ಆಕಸ್ಮಿಕ ಬೆಂಕಿ ಅವಗಡ ಎನ್ನಲಾಗುತ್ತಿದೆ.