ಚಾಮರಾಜನಗರ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಅಲ್ಲಿಂದ ಮೆರವಣಿಗೆ ಹೊರಟ ರೈತರು ಭುವನೇ ಶ್ವರಿ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ನಡೆಸಿ ವಾಹನಗಳನ್ನು ತಡೆದು ಧರಣಿ ನಡೆಸಿದರು. ಬಳಿಕ ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವ ನಕ್ಕೆ ಆಗಮಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿದರು.
ಬಿಡುತ್ತಿರುವುದು ಸರಿಯಲ್ಲ. ಆದ್ದರಿಂದ ಕೂಡಲೇ ನೀರು ನಿಲ್ಲಿಸಬೇಕು. ಜಿಲ್ಲೆಯನ್ನು ಸಾಧಾರಣ ಬರಗಾಲ ಪ್ರದೇಶ ಎಂದು ಘೋಷಣೆ ಮಾಡಿರುವುದನ್ನು ಹಿಂಪಡೆದು, ಸಂಪೂರ್ಣ ಬರಗಾಲ ಎಂದು ಘೋಷಣೆ ಮಾಡಬೇಕು. ರೈತರಿಗೆ 25 ಸಾವಿರ ರೂ. ಬರ ಪರಿಹಾರ ನೀಡಬೇಕು. ರೈತರು ಬೆಳೆದ ಫಸಲನ್ನು ಹಂದಿ, ನವಿಲು ಹಾಗೂ ಕೋತಿಗಳನ್ನು ನಾಶ ಪಡಿಸುತ್ತಿದ್ದು, ಅವುಗಳಿಗೆ ಬೆಳೆ ಪರಿಹಾರ ನೀಡಬೇಕು. ಬಿಳಿಗಿರಿರಂಗನ ಬೆಟ್ಟ ಹಾಗೂ ಮಲೆ ಮಹದೇಶ್ವರ ಬೆಟ್ಟದ ರಸ್ತೆಯನ್ನು ಸರಿಪಡಿಸಬೇಕು. ಎಲ್ಲಾ ಹಾಡಿಗಳಿಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.
ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಆರ್‌ಟಿಒ ಕಚೇರಿಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕು ಎಂದು ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಡಾ. ಗುರುಪ್ರಸಾದ್, ಮಹದೇವಪ್ರಸಾದ್, ನಾಗೇಂದ್ರ, ಸಿದ್ದಯ್ಯ, ಮಹದೇವಸ್ವಾಮಿ, ಮಣಿಕಂಠ ಸೇರಿದಂತೆ ಇತರರು ಭಾಗವಹಿಸಿದ್ದರು.