Thursday, April 3, 2025
Google search engine

Homeಅಪರಾಧಚಾಮರಾಜನಗರ: ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ವಾಹನ ಪಲ್ಟಿ- 20 ಮಹಿಳೆಯರಿಗೆ ಗಾಯ

ಚಾಮರಾಜನಗರ: ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ವಾಹನ ಪಲ್ಟಿ- 20 ಮಹಿಳೆಯರಿಗೆ ಗಾಯ

ಚಾಮರಾಜನಗರ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 20 ಮಹಿಳೆಯರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ಮಂಗಳವಾರ ಬೆಳಿಗ್ಗೆ ತಾಲ್ಲೂಕಿನ ಅಮಚವಾಡಿ ಗ್ರಾಮದಿಂದ ನಿಜಲಿಂಗನಪುರಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಪರಿಣಾಮ ವಾಹನದಲ್ಲಿದ್ದ ಸುಮಾರು ಇಪ್ಪತ್ತು ಮಹಿಳೆಯರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಗಾಯಾಳುಗಳನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular