Saturday, September 6, 2025
Google search engine

Homeಸ್ಥಳೀಯಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ

ಮೈಸೂರು :  ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸೆಪ್ಟಂಬರ್ 9 ರಂದು ಚಾಮುಂಡಿ ಬೆಟ್ಟ ಚಲೋ ಆಯೋಜಿಸಲಾಗಿದೆ.

ಹಿಂದೂ ಜಾಗರಣಾ ವೇದಿಕೆ ವತಿಯಿಂದ ಸೆಪ್ಟಂಬರ್ 9 ರಂದು ನಗರದ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ. ನಮ್ಮ ನಡಿಗೆ ತಾಯಿ ಚಾಮುಂಡೇಶ್ವರಿ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಯಾತ್ರೆ ನಡೆಸಲು ಮುಂದಾಗಿದ್ದಾರೆ.

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರು ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಕಳೆದ ಎರಡು ದಿನಗಳ ಹಿಂದೆ  ಜಿಲ್ಲಾಡಳಿತ ವತಿಯಿಂದ ದಸರಾ ಉದ್ಘಾಟನೆಗೆ ಆಗಮಿಸುವಂತೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿತ್ತು.

RELATED ARTICLES
- Advertisment -
Google search engine

Most Popular