ವಿಶ್ವ ಹಿಂದೂ ಪರಿಷತ್, ಕ್ಲೀನ್ ಮೈಸೂರು ಫೌಂಡೇಶನ್, ಪರಿಸರ ಬಳಗದಿಂದ ಸಾರ್ವಜನಿಕರಲ್ಲಿ ಜಾಗೃತಿ
ಮೈಸೂರು:ಮೈಸೂರಿನ ಚಾಮುಂಡಿ ಬೆಟ್ಟ ಕ್ಕೆ ಆಷಾಢ ಮಾಸದಲ್ಲಿ ಲಕ್ಷಾಂತರ ಜನರು ದೇವಿಯ ದರ್ಶನಕ್ಕಾಗಿ ಆಗಮಿಸುವುದು ಸಹಜವಾಗಿದೆ, ಲಕ್ಷಾಂತರ ಜನರು ಬಂದು ಹೋದ ನಂತರ ಚಾಮುಂಡಿ ಬೆಟ್ಟ ಕಸದ ರಾಶಿಯಾಗಿ ಪರಿವರ್ತನೆ ಆಗುತ್ತಿತ್ತು. ಇದನ್ನು ಮನಗಂಡು ವಿಶ್ವ ಹಿಂದೂ ಪರಿಷತ್, ಕ್ಲೀನ್ ಮೈಸೂರು ಫೌಂಡೇಶನ್, ಪರಿಸರ ಬಳಗ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ 8 ವರ್ಷಗಳಿಂದ ಮಾಡುತ್ತಿದೆ.
ಅದೇ ರೀತಿ ಈ ವರ್ಷವೂ ಮೈಸೂರಿನ ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಹಾಗೂ ಇತರ ಸಂಘ ಸಂಸ್ಥೆಗಳ ಸ್ವಯಂ ಸೇವಕರು ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ಪದಾರ್ಥಗಳನ್ನು ಬೆಟ್ಟಕ್ಕೆ ತರದಂತೆ ಮನವಿ ಮಾಡಲಾಯಿತು.
ಜಿಲ್ಲಾಡಳಿತ ಹಾಗೂ ಮೈಸೂರು ಮಹಾನಗರ ಪಾಲಿಕೆ ಯ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಭಕ್ತಾದಿಗಳು ತರುವ ಬ್ಯಾಗ್ ಗಳಲ್ಲಿ ಪ್ಲಾಸ್ಟಿಕ್ ಪದಾರ್ಥಗಳನ್ನು ವಶಪಡಿಸಿ ಕೊಳ್ಳಲಾಯಿತು. 100 ಕ್ಕೂ ಹೆಚ್ಚು ಸ್ವಯಂ ಸೇವಕರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷರಾದ ಶ್ರೀಯುತ ಮಹೇಶ್ ಕಾಮತ್, ಕಾರ್ಯದರ್ಶಿ ಮಧುಶಂಕರ್, ಸಹಕಾರ್ಯದರ್ಶಿ ಪುನೀತ್, ಜಯಶ್ರೀ, ಸವಿತಾ ಘಾಟ್ಕೆ ಹಾಗೂ ಕಾರ್ಯಕರ್ತರು ಹಾಜರಿದ್ದರು.