ಮೈಸೂರು: ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ 18ನೇ ವಾರ್ಷಿಕೋತ್ಸವದ ಅಂಗವಾಗಿ ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್ ರವರಿಗೆ ಸಹಕಾರಿ ಕ್ಷೇತ್ರದಿಂದ ಗುರುತಿಸಿ ಚಾಣಕ್ಯ ಸೇವಾ ರತ್ನ ಪ್ರಶಸ್ತಿಯನ್ನು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಹಾಗೂ ಇನ್ನಿತರ ಪದಾಧಿಕಾರಿಗಳು ಕೃಷ್ಣಮೂರ್ತಿಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆವರಣದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಇದೇ ಸಂದರ್ಭದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರದ ಸಿ ವಿ ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್ ಎಸ್. ಬಾಲಕೃಷ್ಣ, ಎಂ ಆರ್. ಚೇತನ್, ಹೆಚ್ ಪಿ. ಪಣಿರಾಜ್ ಎನ್,ಮಹಿಮ ಪಿ, ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ, ರಾಜಮ್ಮ ಎಸ್. ಶಾಶ್ವತಿ ನಾಯಕ ಎಂ ಪಿ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಜರಿದ್ದರು.



