ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಯಿದೆ. ಬೆಂಗಳೂರಿನಲ್ಲಿ ಮೋಡ ಕವಿದವಾತಾವರಣ ಇರಲಿದೆ.ಕೆಲವು ಭಾಗ ಗಳಲ್ಲಿ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣ ಕಂಡು ಬರಲಿದೆ ಎಂದು ತಿಳಿಸಿದೆ.