ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆದ ಚಂದ್ರಶೇಖರ್ ನುಗ್ಲಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆ ಆದ ಕೊಡಗಿನ ಎಚ್.ಎಸ್. ಚೇತನ್ ಅವರನ್ನ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಮೈಸೂರು ಸಂಘದ ಮತ್ತು ಕೆ.ಆರ್.ನಗರ ಶಿಕ್ಷಕರ ಸಂಘದಿಂದ ಸನ್ಮಾನಿಸಲಾಯಿತು.

ಮೈಸೂರು ಎನ್.ಪಿ.ಎಸ್.ನೌಕರರ ಸಂಘದ ಜಿಲ್ಲಾಧ್ಯಕ್ಷ ಸಾಲೇಕೊಪ್ಪಲು ಎಸ್.ಆರ್.ಮಂಜುನಾಥ್, ಕೆ ಆರ್ ನಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚಿಕ್ಕಕೊಪ್ಪಲು ಸಿ.ಎನ್. ಸ್ವಾಮಿ,
ಪ್ರಧಾನ ಕಾರ್ಯದರ್ಶಿ ಸಂಗರಶೆಟ್ಟಹಳ್ಳಿ ಎಸ್.ಕೆ. ಸುರೇಶ್ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಬೆಂಗಳೂರಿನ ಗಾಂಧಿನಗರದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಅಭಿನಂದನೆ ಸ್ವೀಕರಿಸಿದ ನೂತನ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಚೇತನ್ ಮಾತನಾಡಿ ತಮ್ಮ ಅವದಿಯಲ್ಲಿ ಸಮಸ್ತ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹುಣಸೂರು ತಾಲೂಕು ಎನ್.ಪಿ.ಎಸ್.ನೌಕರರ ಸಂಘದ ಅಧ್ಯಕ್ಷ ತೀರ್ಥ ಕುಮಾರ್, ಶಿಕ್ಷಕರ ಸಂಘದ ಉಪಾಧ್ಯಕ್ಷ ಡಿ.ಎನ್..ಸತೀಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.