Saturday, April 12, 2025
Google search engine

Homeರಾಜ್ಯಚನ್ನಪಟ್ಟಣ ಉಪಚುನಾವಣೆ : ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕೆ?

ಚನ್ನಪಟ್ಟಣ ಉಪಚುನಾವಣೆ : ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕೆ?

ರಾಮನಗರ : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅಲ್ಲದೆ ಅದರಲ್ಲೂ ಪ್ರಮುಖವಾಗಿ ಚೆನ್ನಪಟ್ಟಣ ಕ್ಷೇತ್ರ ಅತ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದ್ದು ಈ ಒಂದು ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವೆ ತೀವ್ರ ಹಗ್ಗ ಜಗ್ಗಾಟ ನಡೆದಿತ್ತು.

ಇದೇ ವಿಚಾರವಾಗಿ ಇದೀಗ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಹೀಗಾಗಿ ಬಿಜೆಪಿಯ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರನ್ನು ಒಲಿಸಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾತುಕತೆ ನಡೆಸಲಿದ್ದಾರೆ.

ಇನ್ನೊಂದು ಕಡೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪುತ್ರ ನಿಗೆ ಟಿಕೆಟ್ ಕೊಡಿಸುವ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಚರ್ಚಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಸಂಸದ ತುಕಾರಾಂ ಮನೆಯವರಿಗೆ ಟಿಕೆಟ್ ನೀಡಬಾರದು, ಸಚಿವ ಸಂತೋಷ್ ಲಾಡ್ ಸೂಚಿಸಿದವರಿಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಮುಖಂಡರು ಪ್ರತ್ಯೇಕ ಸಭೆ ಮಾಡಿ ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular