Saturday, April 12, 2025
Google search engine

Homeಅಪರಾಧಚೆನ್ನೈ: ಕರ್ತವ್ಯನಿರತ ವೈದ್ಯನಿಗೆ ಚಾಕು ಇರಿತ; ಓರ್ವನ ಬಂಧನ

ಚೆನ್ನೈ: ಕರ್ತವ್ಯನಿರತ ವೈದ್ಯನಿಗೆ ಚಾಕು ಇರಿತ; ಓರ್ವನ ಬಂಧನ

ಚೆನ್ನೈ: ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯನಿಗೆ ರೋಗಿಯ ಮಗ ಚಾಕುವಿನಿಂದ 7 ಬಾರಿ ಮನಬಂದಂತೆ ಇರಿದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ವೈದ್ಯ ಡಾ.ಬಾಲಾಜಿ ಹಲ್ಲೆಗೊಳಗಾದ ವ್ಯಕ್ತಿ. ಆರೋಪಿಯನ್ನು ಪೆರುಗುಳತ್ತೂರಿನ ವಿಘ್ನೇಶ್ ಎಂದು ಗುರುತಿಸಲಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಚೆನ್ನೈನ ಕಲೈಂಜರ್ ಸೆಂಟಿನರಿ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್‌ನಲ್ಲಿ ಈ ಘಟನೆ ನಡೆದಿದೆ. ಡಾ. ಬಾಲಾಜಿ ಕೆಲಸ ಮಾಡುತ್ತಿದ್ದ ವೇಳೆ ವಿಘ್ನೇಶ್ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ವೈದ್ಯರಿಗೆ ಏಳು ಬಾರಿ ಇರಿದಿದ್ದು, ವಿಘ್ನೇಶ್ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಅಲ್ಲಿದ್ದ ಇತರರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಘ್ನೇಶ್ ತಾಯಿ ಕಳೆದ ಕೆಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದಿದ್ದರು. ಜೊತೆಗೆ ಆರು ಬಾರಿ ಕಿಮೋಥೆರಪಿ ಚಿಕಿತ್ಸೆಗೆ ಒಳಗಾಗಿದ್ದರು. ಶ್ವಾಸಕೋಶದ ಸಮಸ್ಯೆ ಎದುರಿಸುತ್ತಿದ್ದರಿಂದ ಅವರನ್ನು ಮನೆಗೆ ಕರೆದೊಯ್ದಿದ್ದರು. ಕೆಲ ದಿನಗಳ ಹಿಂದೆ ಆಕೆಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಇಂದು ಗಿಂಡಿಯಲ್ಲಿರುವ ಕಲೈಂಜರ್ ಸೆಂಟಿನರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದಾಗ ಬಾಲಾಜಿ ಅವರ ಕೊಠಡಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಎಲ್.ಪಾರ್ಥಸಾರಥಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತಮಿಳುನಾಡುಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಡಾ.ಬಾಲಾಜಿ ಅವರಿಗೆ ರೋಗಿಯ ಕುಟುಂಬದ ಸದಸ್ಯ ಚಾಕುವಿನಿಂದ ಇರಿದಿರುವುದು ಆಘಾತಕಾರಿಯಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸಲಾಗಿದೆ. ಎಲ್ಲಾ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ. ಬಾಲಾಜಿ ಅವರಿಗೆ ಮತ್ತು ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಸಬೇಕು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ನಮ್ಮ ಸರ್ಕಾರಿ ವೈದ್ಯರ ನಿಸ್ವಾರ್ಥ ಕೆಲಸ ಅಪಾರವಾಗಿದೆ. ಅವರ ಸುರಕ್ಷತೆಯನ್ನು ನೋಡಿಕೊಳ್ಳುವುದು ನಮ್ಮ ಕರ್ತವ್ಯ, ಮುಂದೆ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular