Monday, April 7, 2025
Google search engine

Homeರಾಜ್ಯಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಚಂದ್ರು ಆಯ್ಕೆ

ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಚಂದ್ರು ಆಯ್ಕೆ

ನವದೆಹಲಿ/ಬೆಂಗಳೂರು: ರಾಜ್ಯದ ಹೆಸರಾಂತ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ, ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪಕ್ಷ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಈ ಘೋಷಣೆ ಮಾಡಿದ್ದಾರೆ. ಇವರೊಂದಿಗೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ.ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ಅವರನ್ನು ನೇಮಿಸಲಾಗಿದೆ. ಪಕ್ಷದ ಈ ಹಿಂದಿನ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರಿಗೆ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಹೊಣೆ ವಹಿಸಲಾಗಿದೆ.

ಈ ಕುರಿತು ಟ್ವೀಟ್​ ಮಾಡಿರುವ ಪೃಥ್ವಿ ರೆಡ್ಡಿ, “ನಮ್ಮ ನೂತನ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕರ್ನಾಟಕದ ಜನರ ಪ್ರೀತಿ ಗಳಿಸಿದ ನಿಸ್ವಾರ್ಥ, ಬದ್ಧತೆಯ ವ್ಯಕ್ತಿ. ಆಮ್ ಆದ್ಮಿ ಪಕ್ಷ ಮತ್ತು ನಮ್ಮ ರಾಜ್ಯದ ಜನತೆಗೆ ಅವರು ಬಹುದೊಡ್ಡ ಆಸ್ತಿ” ಎಂದಿದ್ದಾರೆ. ಇದರ ಜೊತೆಗೆ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಬಿ.ಟಿ.ನಾಗಣ್ಣ ಮತ್ತು ಅರ್ಜುನ್ ಹಲಗಿಗೌಡರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular