Friday, April 11, 2025
Google search engine

Homeರಾಜ್ಯಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಮಂಗಳವಾರ (ಆಗಸ್ಟ್ 1) ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

 ಈ ಸಂದರ್ಭದಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.

 ಇದೇ ಸಂದರ್ಭದಲ್ಲಿ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಮಿಸಿದರು.

 ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಶುಕುಮಾರ್, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular