Saturday, April 19, 2025
Google search engine

Homeರಾಜ್ಯಶೋಷಿತರ ಜಾಗೃತಿ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಶೋಷಿತರ ಜಾಗೃತಿ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿ ಮಾತನಾಡಿದರು.

ಸಮಾವೇಷದಲ್ಲಿ ಶೋಷಿತ ಸಮುದಾಯಗಳ ಹಕ್ಕೊತ್ತಾಯಗಳ ಬೇಡಿಕೆಗಳನ್ನು ಒಕ್ಕೂಟದ ಪದಾಧಿಕಾರಿಗಳು ಮಂಡಿಸಿದರು.‌

ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಬೋಸ್ ರಾಜು, ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ದಿನೇಶ್ ಗುಂಡೂರಾವ್, ಆರ್. ಬಿ.ತಿಮ್ಮಾಪುರ್, ನಾಗೇಂದ್ರ, ಡಿ.ಸುಧಾಕರ್,  ಶಿವರಾಜ್ ತಂಗಡಗಿ, ರಹೀಂಖಾನ್ ಮುಂತಾದವರು ಮಾತನಾಡಿ ದೇಶದಲ್ಲಿ ಶೋಷಿತ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆ ತಕ್ಕ ಪಾಠ ಕಲಿಸುವಂತೆ ಕರೆ ನೀಡಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಚ್.ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ಶಾಸಕರುಗಳಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಅಜಯ್ ಸಿಂಗ್, ನಸೀರ್ ಅಹಮದ್ ಸೇರಿ 20 ಕ್ಕೂ ಹೆಚ್ಚು ಶಾಸಕರುಗಳು ಉಪಸ್ಥಿತರಿದ್ದು ಮಾತನಾಡಿದರು.

RELATED ARTICLES
- Advertisment -
Google search engine

Most Popular