Monday, September 22, 2025
Google search engine

Homeಸ್ಥಳೀಯಮೈಸೂರು ದಸರಾ ಆಹಾರ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಆಹಾರ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮೈಸೂರು: ಮೈಸೂರು ಮಹಾರಾಜ್ ಕಾಲೇಜು ಮೈದಾನದಲ್ಲಿ ನಡೆದ ದಸರಾ ಆಹಾರ ಮೇಳವನ್ನು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅವರು ಕೇಂದ್ರದ ಉಸಖಿ (GST) ನೀತಿಗಳ ಮೇಲೆ ತೀವ್ರ ಟೀಕೆ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಹಸ್ತಕ್ಷೇಪದ ಬಗ್ಗೆ ವ್ಯಂಗ್ಯಭರಿತ ಪ್ರತಿಕ್ರಿಯೆ ನೀಡಿದರು. ಎಂಟು ವರ್ಷ ವಿಪರೀತ ಜಿಎಸ್‌ಟಿ ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.

ಜಿಎಸ್‌ಟಿ 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದ್ದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು.

ಇದೇ ವೇಳೆ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಸಿಎಂ, ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.

ಬಾನು ಮುಷ್ತಾಕ್ ಅವರನ್ನು ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದೂ ಎಂದರು.

RELATED ARTICLES
- Advertisment -
Google search engine

Most Popular