Friday, April 4, 2025
Google search engine

Homeರಾಜ್ಯಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆ.ಎಸ್.ಆರ್.ಟಿ.ಸಿ ಆರೋಗ್ಯ”ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು.

ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲಾ ಆಸ್ಪತ್ರೆಗಳು ಕೆ.ಎಸ್.ಆರ್.ಟಿ.ಸಿ ನೌಕರರು ಮತ್ತು ಕುಟುಂಬದವರು ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ಅವರನ್ನು ಗೌರವಯುತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆಯನ್ನು ನೀಡಲು ಮುಂದಾಗಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಿದ ಬಳಿಕ ತಿಳಿಸಿದರು.

“ಕೆ.ಎಸ್.ಆರ್.ಟಿ.ಸಿ ಆರೋಗ್ಯ” ಯೋಜನೆಯಡಿ ಕೆ.ಎಸ್.ಆರ್.ಟಿ.ಸಿ ಯ ಎಲ್ಲಾ ನೌಕರರು, ಅವರ ತಂದೆ, ತಾಯಿ ಮತ್ತು ಮಕ್ಕಳಿಗೆ ಯಾವುದೇ ಖಾಯಿಲೆ ಅಥವಾ ಖರ್ಚಿನ ಮಿತಿಯಿಲ್ಲದ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 250 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಲಾಗಿದೆ.

ಇದೇ ವೇಳೆ, ಕೆ.ಎಸ್.ಆರ್.ಟಿ.ಸಿ ನೌಕರರು ಅಪಘಾತದಲ್ಲಿ ಮೃತಪಟ್ಟ ಸಂದರ್ಭದಲ್ಲಿ ನೌಕಕರರ ಕುಟುಂಬಕ್ಕೆ ನೀಡಲಾಗುವ ರೂ 1 ಕೋಟಿ ಹಾಗೂ ಸೇವೆಯಲ್ಲಿರುವ ಮೃತಪಟ್ಟ ನೌಕರರ ಕುಟುಂಬಕ್ಕೆ ನೀಡಲಾಗುವ ತಲಾ ರೂ.10 ಲಕ್ಷದ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ವಿಧಾನ ಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಶಾಸಕರಾದ ನಯನಾ ಮೋಟಮ್ಮ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular