ಚಾಮರಾಜನಗರ: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ. ೧೦ ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಿಗ್ಗೆ ೧೧.೩೦ ಗಂಟೆಗೆ ಚಾಮರಾಜನಗರ ತಾಲೂಕಿನ ಆಲೂರು ಗ್ರಾಮಕ್ಕೆ ಆಗಮಿಸಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಲೂರು ಗ್ರಾಮದಲ್ಲಿ ಆಯೋಜಿಸಿರುವ ಮಾಜಿ ರಾಜ್ಯಪಾಲರಾದ ದಿವಂಗತ ಬಿ. ರಾಚಯ್ಯ ಅವರ ಸ್ಮಾರಕ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ ೧೨.೪೦ ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ನಗರದಲ್ಲಿರುವ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡುವರು.
ಸಂಜೆ ೪.೩೦ ಗಂಟೆಗೆ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತಕ್ಕೆ ಆಗಮಿಸುವರು. ೫ ಗಂಟೆಗೆ ಭರಚುಕ್ಕಿ ಜಲಪಾತದ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಂಜೆ ೫.೩೦ ಗಂಟೆಗೆ ಬೆಂಗಳೂರಿಗೆ ತೆರಳುವರು.