ಚಿಕ್ಕಬಳ್ಳಾಪುರ: ಇಲ್ಲಿನ ವಿಧಾನಸಭಾ ಕ್ಷೇತ್ರದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಶಾಸಕ ಪ್ರದೀಪ್ ಈಶ್ವರ್ ವೈಯುಕ್ತಿಕ ಸ್ಕಾಲರ್ಶಿಪ್ ಸ್ಕೀಂ ಘೋಷಣೆ ಮಾಡಿದ್ದಾರೆ.
ಬುಧವಾರ ಚಿಕ್ಕಬಳ್ಳಾಪುರ ನಗರದ ಗೃಹಕಚೇರಿಯಲ್ಲಿ ಮಾತನಾಡಿರುವ ಶಾಸಕರು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಸ್‍ಎಸ್‍ಎಲ್‍ಸಿ, ದ್ವೀತಿಯ ಪಿಯುಸಿ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು, ಅಂತಿಮ ವರ್ಷದ ಪಿಜಿ ಹಾಗೂ ಐಟಿಐ ಸೇರಿದಂತೆ ಡಿಪ್ಲೋಮಾ ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ನೀಡಲು ಶಾಸಕ ಪ್ರದೀಪ್ ಈಶ್ವರ್ ಮುಂದಾಗಿದ್ದಾರೆ.
ಎಸ್‍ಎಸ್‍ಎಲ್‌ಸಿ ವಿದ್ಯಾರ್ಥಿಗಳಿಗೆ ತಲಾ 1,000 ರೂ., ಡಿಪ್ಲೋಮೋ-ಐಟಿಐ ವಿದ್ಯಾರ್ಥಿಗಳಿಗೆ 1,500 ರೂ., ಪದವಿ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ 3,000 ರೂ. ವಿದ್ಯಾರ್ಥಿವೇತನ ನೀಡಲು ತೀರ್ಮಾನಿಸಿದ್ದಾರೆ. ಹೀಗಾಗಿ ಕ್ಷೇತ್ರದ ವಿದ್ಯಾರ್ಥಿಗಳು ಎಂಎಲ್‍ಎ ಪ್ರದೀಪ್ ಈಶ್ವರ್ ವೆಬ್‌ಸೈಟ್‌ನಲ್ಲಿ ತಮ್ಮ ಹೆಸರನ್ನ ನೊಂದಾಯಿಸಿಕೊಳ್ಳಿವಂತೆ ಮನವಿ ಮಾಡಿದ್ದಾರೆ. ಇದಕ್ಕಾಗಿ ಕ್ಯೂಆರ್ ಕೋಡ್ ಇರುವ ಸ್ಕ್ಯಾನರ್ ಸಿದ್ದಪಡಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಸ್ಕ್ಯಾನ್ ಮಾಡಿ ನೊಂದಣಿ ಮಾಡಿಕೊಳ್ಳಿ, ಯಾವುದೇ ಭೌತಿಕ ದಾಖಲಾತಿಗಳನ್ನ ನೀಡುವುದು ಬೇಡ ಅಂತ ಶಾಸಕರು ಮನವಿ ಮಾಡಿಕೊಂಡಿದ್ದಾರೆ.
ಅಕ್ಟೋಬರ್ 15 ರಿಂದ ನವೆಂಬರ್ 15ರ ವರೆಗೂ ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ ಅಂತ ಶಾಸಕ ಪ್ರದೀಪ್ ಈಶ್ವರ್ ಮಾಹಿತಿ ಹಂಚಿಕೊಂಡಿದ್ದಾರೆ.