Monday, April 21, 2025
Google search engine

Homeರಾಜ್ಯಚಿಕ್ಕಮಗಳೂರು: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.

ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸೃಷ್ಟಿ ಸಾವನ್ನಪ್ಪಿದ್ದಾಳೆ.

ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದು, ಮಗಳ ಸಾವಿನಿಂದ ಕುಟುಂಬಸ್ಥರು ಆಘಾತಗೊಂಡಿದ್ದಾರೆ ಸೃಷ್ಟಿ ಇಂದು ಬೆಳಿಗ್ಗೆ 9.30.ರ ಸಮಯದಲ್ಲಿ ಶಾಲೆಗೆ ಹೊಗುತಿದ್ದಾಗ ದಾರದಹಳ್ಳಿ ಸರ್ಕಲ್ ಬಳಿ ಕುಸಿದು ಬಿದ್ದಿದ್ದಾಳೆ.

ಕೂಡಲೇ ಸ್ಥಳೀಯರು ಆಕೆಯನ್ನು ಎಂಜಿಎಂ ಆಸ್ಪತ್ರೆಗೆ ರವಾನಿಸಿದ್ದಾರೆ. ಪರೀಕ್ಷೆ ಮಾಡಿದ ವೈದ್ಯರು ಆಕೆಗೆ ತೀವ್ರ ಹೃದಯಾಘಾತವಾಗಿರುವುದಾಗಿ ಹೇಳಿದ್ದಾರೆ. ಮೃತ ಬಾಲಕಿ ತಾಯಿ-ತಂದೆ, ಇಬ್ಬರು ಸಹೋದರಿಯರು ಹಾಗೂ ಒಬ್ಬ ಸಹೊದರರನ್ನು ಅಗಲಿದ್ದಾರೆ.

ದಾರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇರಲಿಲ್ಲ. ಅಲ್ಲದೆ, ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಸಹ ಇಲ್ಲ. ಈ ಕಾರಣದಿಂದ ಬಾಲಕಿಯೊಬ್ಬಳು ಮೃತಪಟ್ಟಂತೆ ಆಗಿದೆ ಎಂದು ಗ್ರಾಮಸ್ಥರು ಜಿಲ್ಲಾಡಳಿತ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.

RELATED ARTICLES
- Advertisment -
Google search engine

Most Popular