ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನ ಗಿರಿ ಸಮೀಪವಿರುವ ಪಂಡರವಳ್ಳಿಯ ಕಾಫಿ ತೋಟದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ ನಡೆಸಿದೆ.
ಹುಲಿ ದಾಳಿಯಿಂದ ಅಸ್ಸಾಂ ಮೂಲದ ಕಾರ್ಮಿಕ ಮಹಿಳೆಯ ಹಣೆ ಮತ್ತು ಮುಖಕ್ಕೆ ಗಾಯವಾಗಿದ್ದು, ಸರ್ಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ.
ಹುಲಿ ದಾಳಿ ಮಾಡುತ್ತಿದ್ದಂತೆ ಉಳಿದ ಕಾರ್ಮಿಕರು ಕೂಗಾಟ ಕೇಳಿ ಸ್ಥಳದಿಂದ ಹುಲಿ ಪರಾರಿಯಾಗಿದೆ.
8 ವರ್ಷದ ಹಿಂದೆ ಪಂಡರವಳ್ಳಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದರು.
ಮತ್ತೆ ಹುಲಿ ದಾಳಿಯಾಗಿರುವುದು ಗ್ರಾಮಸ್ಥರಲ್ಲಿ ಅತಂಕ ಮೂಡಿದೆ.