ಚಿಕ್ಕಮಗಳೂರು: ರಾಜ್ಯದಲ್ಲಿ ಗೋವುಗಳ ಮೇಲಿನ ದೌರ್ಜನ್ಯ ಪುನಃ ಬೆಳಕಿಗೆ ಬಂದಿದ್ದು, ಈ ಬಾರಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ತಮ್ಮಿಹಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿರುವ ಘಟನೆ ನಡೆದಿದೆ.
ಗ್ರಾಮದ ಶೇಖರಪ್ಪ ಅವರಿಗೆ ಸೇರಿದ 20 ಹಸುಗಳನ್ನು ಬೇರೆಡೆಗೆ ಸಾಗಿಸಲು ಯತ್ನಿಸಲಾಗಿತ್ತು. ಆದರೆ ಈ ಯತ್ನ ವಿಫಲವಾದ ನಂತರ, ದುಷ್ಕರ್ಮಿಗಳು ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಹಸು ನಂತರ ಮೃತಪಟ್ಟಿದೆ. ಘಟನೆಯ ಬಗ್ಗೆ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆಯೂ ರಾಜ್ಯದ ವಿವಿಧ ಭಾಗಗಳಲ್ಲಿ ಗೋವುಗಳ ಮೇಲಿನ ದೌರ್ಜನ್ಯ ಸಂಭವಿಸಿದೆ. ಜನವರಿ 12ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ, ಜನವರಿ 16ರಂದು ನಂಜನಗೂಡು ಬಳಿ ಮತ್ತು ಜನವರಿ 20ರಂದು ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಹೋಲ್ದಾರದ ಹಸುಗಳ ಮೇಲೆ ಹಲ್ಲೆ ನಡೆದಿತ್ತು.
ಇದರಿಂದಾಗಿ ರಾಜ್ಯದಲ್ಲಿ ಪಶುಕ್ರೌರ್ಯದ ಪ್ರಕರಣಗಳು ಮತ್ತೆ ಚರ್ಚೆಗೆ ಗ್ರಾಸವಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.