ಚಿಕ್ಕಮಗಳೂರು: ಶ್ರೀರಾಮಸೇನೆಯ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು ಚಿಕ್ಕಮಗಳೂರು ನಗರದಲ್ಲಿಂದು ಬೃಹತ್ ಶೋಭಾಯಾತ್ರೆ ಆರಂಭವಾಗಿದೆ. ೨,೦೦೦ಕ್ಕೂ ಅಧಿಕ ಮಾಲಾಧಾರಿಗಳು ಪಾಲ್ಗೊಂಡಿದ್ದಾರೆ. ಎಂ.ಜಿ.ರಸ್ತೆ ಕೇಸರಿಮಯವಾಗಿ ಕಂಗೊಳಿಸುತ್ತಿದೆ.
ನಗರದಾದ್ಯಂತ ೯೦೦ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಜಿಲ್ಲಾದ್ಯಂತ ಸಾವಿರಾರು ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಶೋಭಾಯಾತ್ರೆಯ ಬಳಿಕ ದತ್ತಪೀಠಕ್ಕೆ ಮಾಲಾಧಾರಿಗಳು ತೆರಳಲಿದ್ದು, ದತ್ತಪೀಠದಲ್ಲೂ ಪೊಲೀಸರ ಹೈ ಅಲರ್ಟ್ ಹಾಕಲಾಗಿದೆ. ದತ್ತಪೀಠ ಸೇರಿದಂತೆ ಜಿಲ್ಲಾದ್ಯಂತ ಸಿಸಿಟಿವಿ, ಡ್ರೋನ್ ಕ್ಯಾಮರಾ ಕಣ್ಗಾವಲಿ ಕಂಡುಬಂದಿದೆ.