Friday, April 11, 2025
Google search engine

Homeರಾಜ್ಯಚಿಕ್ಕಮಗಳೂರು: ಪ್ರವಾಸಿ ಕೇಂದ್ರಗಳಿಗೆ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಪ್ರವಾಸಿ ಕೇಂದ್ರಗಳಿಗೆ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಜಲಪಾತ, ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಿರುವ ಕಾರಣಕ್ಕೆ ಮುಂಜಾಗೃತ ಕ್ರಮವಾಗಿ ಪ್ರವಾಸಿ ಕೇಂದ್ರಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ದತ್ತಪೀಠ, ಮುಳ್ಳಯ್ಯನಗಿರಿ, ಜಲಪಾತಗಳು ಸೇರಿದಂತೆ ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಝರಿ, ಹೊನ್ನಮ್ಮನಹಳ್ಳ‌ ಜಲಪಾತಕ್ಕೆ ಪ್ರವಾಸಿಗರಿಗೆ ಅವಕಾಶ ನಿರಾಕರಿಸಲಾಗಿದ್ದು, ಕೈಮರ ಚೆಕ್ ಪೋಸ್ಟ್ ನಲ್ಲೇ ಪ್ರವಾಸಿಗರನ್ನು ಸಿಬ್ಬಂದಿಗಳು ತಡೆಯುತ್ತಿದ್ದಾರೆ.

ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಜಾಗ್ರತಾ ಕ್ರಮ ತೆಗೆದುಕೊಂಡಿದ್ದು, ವಾರಾಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

RELATED ARTICLES
- Advertisment -
Google search engine

Most Popular