ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆ- ಗಾಳಿ ಅಬ್ಬರ ಮುಂದುವರೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಜಾರಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ನಡೆದಿದೆ.
ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಧರ್ಮಸ್ಥಳದಿಂದ ತುಮಕೂರು ಜಿಲ್ಲೆ ಶಿರಾಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಐವರಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಗಾಯಾಳುಗಳು ಬಣಕಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.