Friday, April 11, 2025
Google search engine

Homeರಾಜ್ಯಸುದ್ದಿಜಾಲಚಿಕ್ಕಮಗಳೂರು: ಕಾಡಾನೆಗಳ ಹಾವಳಿ; 11 ಗ್ರಾಮಗಳಲ್ಲಿ ನಿಷೇಧಾಜ್ಞೆ, ಶಾಲೆಗಳಿಗೆ ರಜೆ

ಚಿಕ್ಕಮಗಳೂರು: ಕಾಡಾನೆಗಳ ಹಾವಳಿ; 11 ಗ್ರಾಮಗಳಲ್ಲಿ ನಿಷೇಧಾಜ್ಞೆ, ಶಾಲೆಗಳಿಗೆ ರಜೆ

ಚಿಕ್ಕಮಗಳೂರು: ಜಿಲ್ಲೆಯ ಹಲವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದೆ.

ಇದೀಗ ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ. ಸಂಭಾವ್ಯ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಜಿಲ್ಲೆಯ ವಸ್ತಾರೆ, ಮೂಗ್ತಿಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಹೀಗಾಗಿ ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಎರಡು ಗ್ರಾಮ ಪಂಚಾಯತ್ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಗ್ರಾಮಗಳಲ್ಲಿ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಡಾನೆಗಳ ಹಾವಳಿಗೆ ಕಾಫಿ, ಮೆಣಸು, ಬಾಳೆ ಬೆಳೆ ನಾಶವಾಗುತ್ತಿವೆ. ಸದ್ಯ ಮಾರಿಕಟ್ಟೆ ಗ್ರಾಮದ ಕಾಫಿತೋಟದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ.

ಚಿಕ್ಕಮಗಳೂರು ತಾಲೂಕು ಮೂಗ್ತಿಹಳ್ಳಿ, ಮತ್ತು ವಸ್ತಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಮತ್ತಾವರ, ದಂಬದಹಳ್ಳಿ, ಶಿರಗುಂದ, ದುಂಗೆರೆ, ಮೂಗ್ರಿಹಳ್ಳಿ, ಕದ್ರಿಮಿದ್ರಿ ಹಾಗೂ ವಸ್ತಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲದಗುಡ್ಡೆ, ವಸ್ತಾರೆ, ನಂದಿಕೆರೆ, ದಹುಲುವಾಲೆ, ತೊಂಡವಳಿ, ಸಂಸೆ, ದಿಣ್ಣೆಕರೆ, ಗ್ರಾಮಗಳಲ್ಲಿ ಆನೆ ತಂಡವು ಸಂಚರಿಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನ.10 ಸಂಜೆ 7ರಿಂದ ನ.11ರ ರಾತ್ರಿ 9ರವರೆಗೆ ಕಾಡಾನೆ ಇರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಕಾರ್ಯಾಚರಣೆಗೆ ತೊಂದರೆ ಉಂಟಾಗದಂತೆ ಸೂಕ್ತ ಭದ್ರತೆ ಒದಗಿಸಬೇಕಾಗಿ ಆಲ್ದೂರು ವಲಯ ಅರಣ್ಯಾಧಿಕಾರಿ ಕೋರಿಕೊಂಡಿದ್ದಾರೆ.

ಈ ಗ್ರಾಮಗಳಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಡಳಿತದ ಆದೇಶ ತಿಳಿಸಿದೆ.

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಶಾಲಾ ಕಾಲೇಜು ಸಿಬ್ಬಂದಿ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

RELATED ARTICLES
- Advertisment -
Google search engine

Most Popular