Saturday, April 19, 2025
Google search engine

Homeಅಪರಾಧಚಿಕ್ಕಮಗಳೂರು: ಹುಲಿ ಉಗುರು ಡಾಲರ್ ಧರಿಸಿದ್ದ ಇಬ್ಬರು ಅರ್ಚಕರ ಬಂಧನ

ಚಿಕ್ಕಮಗಳೂರು: ಹುಲಿ ಉಗುರು ಡಾಲರ್ ಧರಿಸಿದ್ದ ಇಬ್ಬರು ಅರ್ಚಕರ ಬಂಧನ

ಚಿಕ್ಕಮಗಳೂರು: ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ.

ಚಿಕ್ಕಮಗಳೂರಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular