Saturday, March 14, 2026
Google search engine

Homeಬ್ರೇಕಿಂಗ್ ನ್ಯೂಸ್ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ

ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ

ಅಪ್ರಾಪ್ತ ವಯಸ್ಕ  ಬಾಲಕನನ್ನು ದುಡಿಸುತ್ತಿದ್ದ ಮಾಲೀಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮೂಡಬಿದ್ರೆ ನ್ಯಾಯಾಲಯ ತೀರ್ಪು ನೀಡಿದೆ.
     2024 ರ ಸೆ. 19 ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮೂಡಬಿದ್ರೆ ಕಡಲಕೆರೆಯಲ್ಲಿ ಅನೀರೀಕ್ಷಿತ ತಪಾಸಣೆ ನಡೆಸಿದ ಸಂದರ್ಭದಲ್ಲಿ  ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯೊಂದರಲ್ಲಿ 16 ವಯಸ್ಸಿನ ಕಿಶೋರ ಕಾರ್ಮಿಕನು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು, ನಂತರ ಬಾಲಕನನ್ನು  ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿತ್ತು.
     ಪ್ರಕರಣದ ವಿಚಾರಣೆ ನಡೆಸಿದ  ಮೂಡಬಿದ್ರೆ ನ್ಯಾಯಾಲಯವು, ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.10 ಸಾವಿರ ದಂಡ ಹಾಗೂ 1 ದಿನ ಜೈಲು ಶಿಕ್ಷೆಯನ್ನು  ವಿಧಿಸಿ ತೀರ್ಪನ್ನು ನೀಡಿದೆ. ಅಲ್ಲದೇ ಕಿಶೋರ ಕಾರ್ಮಿಕನ ಪುನರ್ವಸತಿಗಾಗಿ ರೂ.20 ಸಾವಿರ ಕಾರ್ಪಸ್ ನಿಧಿಯನ್ನು ಸಹ ವಸೂಲಾತಿ ಮಾಡಲಾಗಿರುತ್ತದೆ.
    ದಾಳಿಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್, ಕಾರ್ಮಿಕ ನಿರೀಕ್ಷಕ ವಿರೇಂದ್ರ ಎಸ್ ಕುಂಬಾರ,  ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಶ್ರೀನಿವಾಸ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.    
    ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ)ಕಾಯ್ದೆ-1986ರನ್ವಯ  14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ  ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ.
    15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ಕಿಶೋರಾವಸ್ಥೆಯ ಕಾರ್ಮಿಕರನ್ನು ದುಡಿಸಿಕೊಳ್ಳುವುದನ್ನು ನಿಯಂತ್ರಿಸಲಾಗಿರುತ್ತದೆ.
    ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000 ಯವರೆಗೆ ದಂಡ ಹಾಗೂ 2 ವರ್ಷದವರೆಗೆ  ಜೈಲು ಶಿಕ್ಷೆಯನ್ನು  ವಿಧಿಸಲಾಗುತ್ತದೆ. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್‍ನ್ನು ಸಹ ದಾಖಲಿಸಲಾಗುತ್ತದೆ.
     ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್‍ಲೈನ್:1098 ಅಥವಾ  ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆ : 0824-2435343/2433132/2437479 ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ದೂರವಾಣಿ ಸಂಖ್ಯೆ 2433131 ಗೆ ಕರೆ ಮಾಡಿ ತಿಳಿಸಬಹುದು ಎಂದು ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular