Monday, April 21, 2025
Google search engine

Homeರಾಜ್ಯಸುದ್ದಿಜಾಲಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ ಅಗತ್ಯ : ಸತೀಶ್

ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ ಅಗತ್ಯ : ಸತೀಶ್

ರಾಮನಗರ: ಕ್ರೀಡೆಗಳನ್ನು ಆಡುವುದರಿಂದ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯಗಳನ್ನು ಕಾಪಾಡಿಕೊಳ್ಳಬಹುದು. ಆದ್ದರಿಂದ ಪ್ರತಿಯೊಬ್ಬರೂ ಕೂಡ ಕ್ರೀಡೆಯಲ್ಲಿ ಭಾಗವಹಿಸುವಂತೆ ರಾಮನಗರಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್‌ ಅವರು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಆನ್‌ಲೈನ್ ಕ್ರೀಡೆಗಳಲ್ಲಿ ಆಸಕ್ತಿ ವಹಿಸುತ್ತಿದ್ದಾರೆ.ಯುವ ಪೀಳಿಗೆಯು ಗ್ರಾಮೀಣ ಕ್ರೀಡೆಗಳನ್ನು ಆಡಬೇಕು ಹಾಗೂ ಮುಂದಿನ ಪೀಳಿಗೆಯವರೆಗೆ ಬೆಳೆಸಬೇಕು, ಕ್ರೀಡಾಪಟುಗಳು ರಾಜ್ಯ ಮತ್ತುರಾಷ್ಟ ಮಟ್ಟದಲ್ಲಿ ವಿಜೇತರಾದರೇ ಕೆಲವೊಮ್ಮೆ ಸರ್ಕಾರಿ ಉದ್ಯೋಗಗಳನ್ನು ಸಹ ಪಡೆಯಬಹುದು ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಸಹಾಯಕ ನಿರ್ದೇಶಕ ಅನಿತಾ ಅವರುಮಾತನಾಡಿ, ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಗುಂಪು ಕ್ರೀಡೆಗಳಾದ ಕಬ್ಬಡಿ, ಖೋ ಖೋ, ವಾಲಿಬಾಲ್ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಉತ್ತಮ ಮಟ್ಟದ ವ್ಯಕ್ತಿತ್ವರೂಪಿಸುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜ್ಯೋತಿ ಭಾಪುಲೆ ಸಂಘದಅಧ್ಯಕ್ಷರು, ದೈಹಿಕ ಶಿಕ್ಷಕರು,ಕ್ರೀಡಾಪಟುಗಳು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular