ಗುಂಡ್ಲುಪೇಟೆ: ತಾಲ್ಲೂಕಿನ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಿಕನ್ ಊಟ ಸೇವಿಸಿ ಮಕ್ಕಳು ಅಸ್ವಸ್ಥರಾಗಿದ್ದ ಪ್ರಕರಣದಲ್ಲಿ ಕರ್ತವ್ಯ ಲೋಪ ಕಂಡು ಬಂದ ಹಿನ್ನಲೆಯಲ್ಲಿ ವಸತಿ ಶಾಲೆಯ ಪ್ರಾಂಶುಪಾಲ ಎಂ. ಕುಮಾರಸ್ವಾಮಿ ಅವರನ್ನು ಅಮಾನತು ಪಡಿಸಲಾಗಿದೆ.
ವಸತಿ ಶಾಲೆಯ ಆಡಳಿತಾತ್ಮಕ ಕಾರ್ಯಗಳನ್ನು ಅಸಮರ್ಪಕವಾಗಿ ನಿರ್ವಹಿಸಿ, ಕರ್ತವ್ಯ ಲೋಪ ಎಸಗಿ ವಸತಿ ನಿಲಯದ ಸ್ವಚ್ಛತೆ, ಆಹಾರ ಸಾಮಾಗ್ರಿಗಳ ನಿರ್ವಹಣೆಯಲ್ಲಿ ವಿಫಲತೆ, ವಸತಿ ನಿಲಯದ ಸೌಲಭ್ಯ ನಿರ್ವಹಣೆಯಲ್ಲಿ ವಿಫಲವಾಗಿರುವುದು ಹಾಗೂ ನಿಲಯಪಾಲಕರ ಪ್ರಭಾರವನ್ನು ಬೇರೆಯವರಿಗೆ ವಹಿಸಿದೆ ತಾವೇ ನಿರ್ವಹಣೆ ಮಾಡುತ್ತಿರುವುದು ಕಂಡುಬಂದ ಹಿನ್ನಲೆಯಲ್ಲಿ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ನವೀನ ಕುಮಾರ್ ರಾಜು ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಮಕ್ಕಳು ಊಟ ಸೇವಿಸಿ ಅಸ್ವಸ್ಥರಾಗಿದ್ದ ಸಂಬಂಧ ಶಾಲೆಯ ಪ್ರಾಂಶುಪಾಲ ಕರ್ತವ್ಯ ನಿರ್ವಹಣೆ ಮಾಡುವುದರಲ್ಲಿ ವಿಫಲರಾಗಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನೂನ್ಯತೆ ಆಧರಿಸಿ ಪತ್ರ ಬರೆದಿದ್ದರು.