ಮಂಗಳೂರು (ದಕ್ಷಿಣ ಕನ್ನಡ) : ಎರಡು ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಶ್ರಫ್ @ ಚಿಲ್ಲಿ ಅಶ್ರಫ್ ಎಂದು ಗುರುತಿಸಲಾಗಿದೆ.
ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 165/2015 ಕಲಂ: 397 IPC ( 07- 08-2015 ರಂದು ವಿಟ್ಲಪೇಟೆಯಲ್ಲಿ ಜಗದೀಶ್ ಕಾಮತ್ ಎಂಬವರಿಗೆ ಮೆಣಸಿನ ಪುಡಿಯ ಎರಚಿ ದರೋಡೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಆರೋಪಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿದ್ದ. ಈ ಬಗ್ಗೆ LPC – 03/2025 ರಂತೆ ವಾರೆಂಟ್ ಜಾರಿಯಾಗಿರುತ್ತದೆ ) ಇನ್ನೊಂದು ಕೇಸಲ್ಲಿ ವಿಟ್ಲ ಠಾಣಾ ಆ.ಕ್ರ ನಂ- 16/2016 ಕಲಂ. 457.380 IPC. ( 23-01-2016 ರಂದು ಕೊಲ್ನಾಡು ಗ್ರಾಮದ ವೈನ್ ಶಾಪ್ ನ ಬಾಗಿಲು ಮುರಿದು ನಗದು ಕಳ್ಳತನ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು. ಸದ್ರಿ ಪ್ರಕರಣದಲ್ಲಿ ದಸ್ತಗಿರಿಯಾಗದೆ ತಲೆಮರೆಸಿ ಕೊಂಡಿದ್ದ. ಈ ಬಗ್ಗೆ ನ್ಯಾಯಾಲಯದಿಂದ 82 & 83 ವಾರಂಟ್ ಜಾರಿಯಾಗಿದೆ.
ಈ ಮೇಲಿನ ಎರಡು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯನ್ನು ಕೂಳೂರು ಮಂಜೇಶ್ವರ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿತನಿಗೆ ನ್ಯಾಯಾಂಗ ಬಂಧನ ನೀಡಿದೆ.