ಮಂಗಳೂರು (ದಕ್ಷಿಣ ಕನ್ನಡ): ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಂಡಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಹಲವಾರು ಬೆಳವಣಿಗಳು ನಡೆದಿದ್ದವು.
ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.23ರಂದು ಚಿನ್ನಯ್ಯನನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 12 ದಿನಗಳ ಕಾಲ ಕಸ್ಟಡಿಗೆ ಪಡೆದ ತನಿಖೆ ನಡೆಸಿ ಸೆ.3 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ಚಿನ್ನಯ್ಯನನ್ನು ಮತ್ತೆ ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಿ ಸೆ.6 ರಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಸದ್ಯ ಆರೋಪಿ ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದಾನೆ.