ಶ್ರೀರಂಗಪಟ್ಟಣ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಮಕ್ಕಗಳು (ಚಿಣ್ಣರು) ಕಾವೇರಿ ನದಿಯ ಸ್ನಾನಘಟ್ಟದ ಬಳಿ ಪ್ರತಿಭಟನೆ ನಡೆಸಿದರು.
ಭೂಮಿ ತಾಯಿ ಹೋರಾಟ ಸಮಿತಿ ವತಿಯಿಂದ ವಿವಿಧ ನಾಮಫಲಕ ಹಿಡಿದು ರೈತ ಮುಖಂಡರು ಮತ್ತು ಮಕ್ಕಳು ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರ ಹಾಗೂ ನಿರ್ವಹಣಾ ಸಮಿತಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.