ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ವತಿಯಿಂದ ಕಾರ್ಮಿಕರಿಂದ ಪ್ರತಿಭಟನೆ ನಡೆಸಿತು.
ಮಂಡ್ಯ ಡಿಸಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ, ರೈತ ವಿರೋಧಿ ಕಾನುನು ವಾಪಸ್ ಪಡೆಯಬೇಕು. ಅಂಗನವಾಡಿ ಕಾರ್ಯಕರ್ತರಿಗೆ ವೇತನ ಹೆಚ್ಚಳ, ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.